ಮಹಾರಾಷ್ಟ್ರದಲ್ಲಿ ಸೋಮವಾರದಿಂದ ದೇವಸ್ಥಾನ, ಮಸೀದಿ, ಚರ್ಚ್ ಗಳು ಪುನರಾರಂಭ
ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ಮಾರ್ಚ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ನಂತರ ಬಂದ್ ಆಗಿದ್ದ ಧಾರ್ಮಿಕ ಪೂಜಾ ಸ್ಥಳಗಳನ್ನು ಸೋಮವಾರದಿಂದ ರಾಜ್ಯಾದ್ಯಂತ ಮತ್ತೆ ತೆರೆಯಲಿವೆ...

ಮುಂಬೈ: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ಮಾರ್ಚ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ನಂತರ ಬಂದ್ ಆಗಿದ್ದ ಧಾರ್ಮಿಕ ಪೂಜಾ ಸ್ಥಳಗಳನ್ನು ಸೋಮವಾರದಿಂದ ರಾಜ್ಯಾದ್ಯಂತ ಮತ್ತೆ ತೆರೆಯಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ.
ರಾಜ್ಯದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ ಸಿಎಂ, "ರಾಕ್ಷಸ ಕೊರೋನಾ ವೈರಸ್ ಇನ್ನೂ ನಮ್ಮ ನಡುವೆಯೇ ಇದೆ ಎಂಬುದನ್ನು ನಾವು ಮರೆಯಬಾರದು. ಈ ರಾಕ್ಷಸನ ಅಬ್ಬರ ಈಗ ನಿಧಾನವಾಗಿ ಕಡಿಮೆಯಾಗುತ್ತಿದ್ದರೂ, ನಾವು ಸಂತೃಪ್ತರಾಗಲು ಸಾಧ್ಯವಿಲ್ಲ. ನಾಗರಿಕರು ಶಿಸ್ತನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾಂಕ್ರಾಮಿಕ ಸಮಯದಲ್ಲಿ ಧಾರ್ಮಿಕ ಪೂಜಾ ಸ್ಥಳಗಳನ್ನು ಬಂದ್ ಮಾಡಿದ್ದರೂ, ದೇವರು ಎಲ್ಲಾ ಭಕ್ತರನ್ನು ವೈದ್ಯರು, ನರ್ಸ್ ಗಳು ಹಾಗೂ ಆರೋಗ್ಯ ಸಿಬ್ಬಂದಿಗಳ ರೂಪದಲ್ಲಿ ಬಂದು ನಮ್ಮ ಆರೋಗ್ಯ ನೋಡಿಕೊಂದ್ದಾನೆ ಎಂದು ಮುಖ್ಯಮಂತ್ರಿ ಹೇಳಿದರು.
ನವೆಂಬರ್ 16 ರಿಂದ ಭಕ್ತರಿಗಾಗಿ ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು ಮತ್ತೆ ತೆರೆಯಲಾಗುತ್ತಿದೆ. ಎಲ್ಲರಬ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


