4 ನೇ ಬಾರಿ ಬಿಹಾರ ಸಿಎಂ ಆಗಿ ನ.16 ಕ್ಕೆ ನಿತೀಶ್ ಕುಮಾರ್ ಪ್ರಮಾಣ ವಚನ: ಡಿಸಿಎಂ ಸ್ಥಾನಕ್ಕೆ ಸುಶೀಲ್ ಮೋದಿ
ಬಿಹಾರ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಎನ್ ಡಿಎ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡಿದ್ದಾರೆ.

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಎನ್ ಡಿಎ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡಿದ್ದಾರೆ.
ನ.16 ರಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಮುಂದುವರೆಯಲಿದ್ದಾರೆ.
ಎನ್ ಡಿಎ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ನಿತೀಶ್ ನಾಲ್ಕನೇ ಬಾರಿಗೆ ಸಿಎಂ ಆಗುತ್ತಿದ್ದಾರೆ. ಈ ಬಗ್ಗೆ ಎನ್ ಡಿಎ ಅಧಿಕೃತ ಘೋಷಣೆ ಮಾಡಲಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬಿಹಾರಕ್ಕೆ ಸುಶೀಲ್ ಮೋದಿ ಬದಲು ಕಾಮೇಶ್ವರ್ ಚೌಪಾಲ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ವದಂತಿಗಳಿದ್ದವು. ಆದರೆ ಈಗ ಈ ಹಿಂದಿನ ಸೂತ್ರವನ್ನೇ ಮುಂದುವರೆಸಲು ಎನ್ ಡಿಎ ತೀರ್ಮಾನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


