ಪಿಡಿಪಿ ತೊರೆದ ಹಿರಿಯ ನಾಯಕ ಮುಜಾಫರ್ ಹುಸೇನ್ ಬೇಗ್
ಪಿಡಿಪಿ ನಾಯಕ, ಜಮ್ಮು-ಕಾಶ್ಮೀರ ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ.

ಶ್ರೀನಗರ: ಪಿಡಿಪಿ ನಾಯಕ, ಜಮ್ಮು-ಕಾಶ್ಮೀರ ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆ ಸಂಬಂಧ ಅಸಮಾಧಾನಗೊಂಡಿದ್ದು, ಪಿಡಿಪಿ ನಾಯಕ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ.
"ಈ ಮೈತ್ರಿಯಲ್ಲಿ ಎನ್ ಸಿ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.ಇದು ಪಿಡಿಪಿ ಹಿತಾಸಕ್ತಿಗೆ ವಿರುದ್ಧವಾಗಿದೆ, ಆದ್ದರಿಂದ ಪಕ್ಷ ತೊರೆಯುತ್ತಿದ್ದೇನೆ, ಈ ಬಗ್ಗೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರೊಂದಿಗೂ ಮಾತನಾಡಿದ್ದೇನೆ ಎಂದು ಬೇಗ್ ತಿಳಿಸಿದ್ದಾರೆ.
ಬೇಗ್ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗಾಗಿ ಸಮಾನ ಮನಸ್ಕ ಪಕ್ಷಗಳು ಮಾಡಿಕೊಂಡಿರುವ ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಪಿಎಜಿಡಿ)ಯ ಅಡಿಯಲ್ಲಿ ಪಿಡಿಪಿ ಹಾಗೂ ಎನ್ ಸಿ ಡಿಡಿಸಿ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತಿವೆ.
ಮೊದಲ ಪಟ್ಟಿಯಲ್ಲಿ 27 ಅಭ್ಯರ್ಥಿಗಳನ್ನು ಹೆಸರನ್ನು ಘೋಷಿಸಲಾಗಿದ್ದು, 21 ಎನ್ ಸಿ ಅಭ್ಯರ್ಥಿಗಳಿದ್ದರೆ, 4 ಪಿಡಿಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ, ಸಜಾದ್ ಲೋನ್ ಅವರ ಪಿಸಿ ಪಕ್ಷದ 2 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


