ಹರ್ಯಾಣ ರಾಜ್ಯಪಾಲರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಹರ್ಯಾಣ ರಾಜ್ಯಪಾಲ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಂಡೀಘಡ: ಹರ್ಯಾಣ ರಾಜ್ಯಪಾಲ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
81 ವರ್ಷ ವಯಸ್ಸಿನ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಪಂಜಾಬ್ ನ ಮೊಹಾಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸತ್ಯದೇವ ನರೈನ್ ಆರ್ಯ ಅವರನ್ನು ಮುಂಜಾಗ್ರತಾ ಕ್ರಮವಾಗಿ ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಇದಕ್ಕೂ ಮೊದಲು ಸಿಎಂ ಖಟ್ಟರ್, ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಸೇರಿದಂತೆ ಅವರ ಸಂಪುಟದ ಹಲವು ಮಂತ್ರಿಗಳು ಸಹೋದ್ಯೋಗಿಗಳು, ಹರಿಯಾಣ ವಿಧಾನಸಭೆ ಸ್ಪೀಕರ್ ಜಿಯಾನ್ ಚಂದ್ ಗುಪ್ತಾ ಅವರು ಸೋಂಕಿಗೆ ತುತ್ತಾಗಿದ್ದರು ಮತ್ತು ನಂತರ ಅದರಿಂದ ಚೇತರಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


