ದೇಶ

ಹಿಮಾಚಲಪ್ರದೇಶ: ನದಿಗೆ ಬಿದ್ದ ವಾಹನ, 7ಮಂದಿ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ನದಿಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

ಹಿಮಾಚಲಪ್ರದೇಶ: ನದಿಗೆ ಬಿದ್ದ ವಾಹನ, 7ಮಂದಿ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಮಂಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ನದಿಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

ಸುಖೇತಿ ಖುದ್ ನದಿಗೆ ಪ್ರಯಾಣಿಕರು ಸಂಚರಿಸುತ್ತಿದ್ದ ವಾಹನ ಬಿದ್ದ ಪರಿಣಾಮ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಮಹಿಂದ್ರಾ ಪಿಕ್ ಅಪ್ ವಾಹನ ಸುಮಾರು 2.30 ರ ಮಧ್ಯರಾತ್ರಿಯಲ್ಲಿ ನದಿಗೆ ಬಿದ್ದಿದೆ ಎಂದು ಹೇಳಿದ್ದಾರೆ.

ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸೇರಿಸುವಾಗ ದಾರಿ ಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 279ರ ಅಡಿಯಲ್ಲಿ ರ್ಯಾಶ್ ಡೈರ್ವಿಂಗ್ ಪ್ರಕರಣ  ದಾಖಲಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.