ಮಧ್ಯ ಪ್ರದೇಶ ಸರ್ಕಾರದಿಂದ ಲವ್ ಜಿಹಾದ್ ತಡೆಗೆ ಕಾನೂನು, ಉಲ್ಲಂಘಿಸಿದರೆ 5 ವರ್ಷ ಜೈಲು
ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದು ಶಿವರಾಜ್ ಸಿಂಗ್ ಚೌಹಾಣ್ ಅವರು,...

ಭೋಪಾಲ್: ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದು ಶಿವರಾಜ್ ಸಿಂಗ್ ಚೌಹಾಣ್ ಅವರು, ವಿವಾಹದ ಕಾರಣಕ್ಕಾಗಿ ನಡೆಯುವ ಧಾರ್ಮಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸುವುದಾಗಿ ಮಂಗಳವಾರ ಹೇಳಿದ್ದಾರೆ.
ಮುಂಬರುವ ಅಧಿವೇಶನದಲ್ಲಿ ಮಧ್ಯ ಪ್ರದೇಶದ ಧರ್ಮ ಸ್ವತಂತ್ರ 2020 ಮಸೂದೆಯನ್ನು ಮಂಡಿಸಲು ನಾವು ಸಿದ್ಧತೆ ನಡೆಸಿದ್ದೇವೆ. ಈ ಮಸೂದೆಯು ಬಲವಂತವಾಗಿ, ಮೋಸದಿಂದ ಅಥವಾ ಧಾರ್ಮಿಕ ಮತಾಂತರಕ್ಕಾಗಿ ನಡೆಯುವ ಎಲ್ಲಾ ವಿವಾಹಗಳನ್ನು ಅನೂರ್ಜಿತಗೊಳಿಸಲಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಲವ್ ಜಿಹಾದ್ ನಲ್ಲಿ ಭಾಗಿಯಾಗುವ ಆರೋಪಿಗಳಿಗೆ ಐದು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಲು ಹೊಸ ಕಾನೂನಿನಲ್ಲಿ ಅವಕಾಶ ಇದೆ”ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಇಂದು ಭೋಪಾಲ್‌ನಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.
ಈಗಾಗಲೇ, ಬಿಜೆಪಿ ಆಡಳಿತವಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣ ಮತ್ತು ಕರ್ನಾಟಕ - 'ಲವ್ ಜಿಹಾದ್' ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಬಗ್ಗೆ ಸುಳಿವು ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


