ದೇಶ

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸಹೋದರರು ಅಂದರ್!

ಉತ್ತರ ಪ್ರದೇಶದ ಫಿಲಿಬಿಟ್ ನಲ್ಲಿ ನಡೆದಿದ್ದ 17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸಹೋದರರು ಅಂದರ್!
ಅತ್ಯಾಚಾರ
Published On :

ಫಿಲಿಬಿಟ್: ಉತ್ತರ ಪ್ರದೇಶದ ಫಿಲಿಬಿಟ್ ನಲ್ಲಿ ನಡೆದಿದ್ದ 17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೋಸ್ಕೋ ಕಾಯ್ದೆಯ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಅ.09 ರಂದು ಈ ಘಟನೆ ನಡೆದಿದ್ದು, 23-28 ವರ್ಷದ ನಾಲ್ವರು ಸಹೋದರರು ಯುವತಿಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಯುವತಿ ಕಿರುಚಿಕೊಂಡಿದ್ದು ತಕ್ಷಣವೇ ಎಚ್ಚೆತ್ತ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿದ್ದರ ಪರಿಣಾಮ ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಕಿರಾತಕರು ಬೆದರಿಕೆಯೊಡ್ಡಿದ್ದಾರೆ. ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರಾದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯದಾನಕ್ಕಾಗಿ ಮನವಿ ಮಾಡಿ ಯುವತಿ ಹಾಗೂ ಕುಟುಂಬ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಈ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.