ಏಷ್ಯಾದ ಬಲಿಷ್ಠ ರಾಷ್ಟ್ರಗಳ 'ಆರ್‌ಸಿಇಪಿ' ಒಕ್ಕೂಟದಿಂದ ಭಾರತ ಹೊರಕ್ಕೆ: ಸ್ಪಷ್ಟನೆ ಕೊಟ್ಟ ಜೈಶಂಕರ್
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಏಷ್ಯಾದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿರುವ ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಇಂದ ಹೊಂದಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಈ ಒಪ್ಪಂದ ಪ್ರವೇಶಿಸುವುದು ತಕ್ಷಣದ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
ಈ ಒಪ್ಪಂದ ಸಂಬಂಧ ಹಲವು ಪ್ರಮುಖ ಅಂಶಗಳ ಮೇಲೆ ಗಮನ ಹರಿಸಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿತ್ತು. ಆದ್ದರಿಂದ ಇದಕ್ಕೆ ಸಹಿ ಹಾಕುವ ಮುನ್ನ ಎಲ್ಲಾ ಆಯಾಮದಿಂದ ಚಿಂತನೆ ನಡೆಸಬೇಕಿತ್ತು ಎಂದಿದ್ದಾರೆ.
ಬುಧವಾರ ಯೂರೋಪಿಯನ್ ನೀತಿ ಅಧ್ಯಯನ ಕೇಂದ್ರ ಆಯೋಜಿಸಿದ್ದ ವೆಬ್ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


