ಬೆಟ್ಟಿಂಗ್ ಕಾನೂನು ಬದ್ಧಗೊಳಿಸುವುದರಿಂದ ಮ್ಯಾಚ್ ಫಿಕ್ಸಿಂಗ್ ನಿಯಂತ್ರಿಸಬಹುದು: ಕೇಂದ್ರ ಸಚಿವ ಅನುರಾಗ್ ಠಾಕೂರ್
ಬೆಟ್ಟಿಂಗ್ ಅನ್ನು ಕಾನೂನು ಬದ್ಧಗೊಳಿಸುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಮತ್ತು ಮ್ಯಾಚ್ ಫಿಕ್ಸಿಂಗ್‌ನಂತಹ "ಅಪವಿತ್ರ ಹಾಗೂ ಭ್ರಷ್ಟ" ಪದ್ಧತಿಗಳನ್ನು ನಿಯಂತ್ರಿಸಬಹುದು ಎಂದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ.

ಮುಂಬೈ: ಬೆಟ್ಟಿಂಗ್ ಅನ್ನು ಕಾನೂನು ಬದ್ಧಗೊಳಿಸುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಮತ್ತು ಮ್ಯಾಚ್ ಫಿಕ್ಸಿಂಗ್‌ನಂತಹ "ಅಪವಿತ್ರ ಹಾಗೂ ಭ್ರಷ್ಟ" ಪದ್ಧತಿಗಳನ್ನು ನಿಯಂತ್ರಿಸಬಹುದು ಎಂದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ.
ಐಸಿಐಸಿಐ ಸೆಕ್ಯುರಿಟೀಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ, ದೇಶದಲ್ಲಿ ಬೆಟ್ಟಿಂಗ್ ಕಾನೂನುಬದ್ಧಗೊಳಿಸಬೇಕು ಎಂಬ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಸದಸ್ಯ ನಿಲೇಶ್ ಶಾ ಸಲಹೆಗೆ ಪ್ರತಿಕ್ರಿಯಿಸಿದ ಠಾಕೂರ್, ಜಗತ್ತಿನ ಅನೇಕ ದೇಶಗಳಲ್ಲಿ ಕ್ರೀಡೆಗಳ ಮೇಲೆ ನಡೆಯುವ ಬೆಟ್ಟಿಂಗ್ ಕಾನೂನುಬದ್ಧವಾಗಿದೆ.ಹೀಗಾಗಿ ನಮ್ಮ ದೇಶದಲ್ಲಿ ಬೆಟ್ಟಿಂಗ್ ಕಾನೂನುಬದ್ಧಗೊಳಿಸುವುದರಿಂದ ಮ್ಯಾಚ್ ಫಿಕ್ಸಿಂಗ್ ನಿಯಂತ್ರಿಸಬಹುದು ಎಂದಿದ್ದಾರೆ.
ಬೆಟ್ಟಿಂಗ್ ಕಾನೂನುಬದ್ಧಗೊಳಿಸುವುದರಿಂದ ಸಾವಿರಾರು ಕೋಟಿ ಆದಾಯ ಸರ್ಕಾರದ ಬೊಕ್ಕಸಕ್ಕೆ ಬರುತ್ತದೆ ಮತ್ತು ಈ ಹಣವನ್ನು ಕ್ರೀಡೆಯ ಅಭಿವೃದ್ಧಿಗೆ ಅಥವಾ ಇತರ ಚಟುವಟಿಕೆಗಳಿಗೆ ಖರ್ಚು ಮಾಡಬಹುದು ಎಂದು ಸಚಿವರು ಹೇಳಿದ್ದಾರೆ.
"ನನ್ನ ಸಲಹೆಯು, ಭೂಗತವಾಗಿರುವ ಬೆಟ್ಟಿಂಗ್ ಮತ್ತು ಜೂಜಿನ ಚಟುವಟಿಕೆಗಳನ್ನು ಕಾನೂನುಬದ್ಧಗೊಳಿಸಬೇಕು" ಎಂದು ನಿಲೇಶ್ ಶಾ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


