ದೇಶ

ಟಿಎಂಸಿ ಕಾರ್ಯಕರ್ತನಿಗೆ ಚೂರಿ ಇರಿತ, ಕಚ್ಚಾ ಬಾಂಬ್‌ ತೂರಾಟ: ಬಿಜೆಪಿ ವಿರುದ್ಧ ಆರೋಪ

ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ.

ಟಿಎಂಸಿ ಕಾರ್ಯಕರ್ತನಿಗೆ ಚೂರಿ ಇರಿತ, ಕಚ್ಚಾ ಬಾಂಬ್‌ ತೂರಾಟ: ಬಿಜೆಪಿ ವಿರುದ್ಧ ಆರೋಪ
Published On :

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. 

ಆಕಾಶ್ ಪ್ರಸಾದ್ (22) ಹತ್ಯೆಯಾಗಿರುವ ಕಾರ್ಯಕರ್ತನಾಗಿದ್ದು, ಹಲವುಬಾರಿ ಚೂರಿ ಇರಿತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಅಷ್ಟೇ ಅಲ್ಲದೇ ಆತನ ಮೇಲೆ ಕಚ್ಚಾ ಬಾಂಬ್‌ ಎಸೆದು ದಾಳಿ ನಡೆಸಲಾಗಿದೆ. 
 
ಪಾಲ್ಘಾಟ್ ರಸ್ತೆಯಲ್ಲಿ ಜಗದ್ದಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆತ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ. 

ಪಕ್ಷದ ಕಾರ್ಯಕರ್ತರಲ್ಲಿ ಭಯ ಮೂಡಿಸುವುದಕ್ಕಾಗಿ ಈ ಹತ್ಯೆ ಮಾಡಲಾಗಿದ್ದು ಬಿಜೆಪಿ ಇದಕ್ಕೆ ಹೊಣೆ ಎಂಬ ಆರೋಪವನ್ನೂ ಟಿಎಂಸಿ ಮಾಡಿದೆ. ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಟಿಎಂಸಿ ಆರೋಪ ಮಾಡಿದ್ದು, ಇದು ಬಿಜೆಪಿಯ ಷಡ್ಯಂತ್ರ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.