ಈಗ ಮತ್ತೊಂದು ಟ್ವೀಟ್ ಗಾಗಿ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಎಜಿ ಅಸ್ತು
ಸುಪ್ರೀಂ ಕೋರ್ಟ್ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ನವೆಂಬರ್ 18 ಮಾಡಿದ್ದ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಕಾಮಿಡಿಯನ್ ಕುನಾಲ್ ಕಾಮ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಅನುಮತಿ ನೀಡಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ನವೆಂಬರ್ 18 ಮಾಡಿದ್ದ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಕಾಮಿಡಿಯನ್ ಕುನಾಲ್ ಕಾಮ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಅನುಮತಿ ನೀಡಿದ್ದಾರೆ.
ಕಳೆದ ವಾರ ರಿಪಬ್ಲಿಕ್ ಟಿವಿ ಸಂಪಾದಕ ಆರ್ನಬ್ ಗೋಸ್ವಾಮಿ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಟೀಕಿಸಿ ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದರು. ಈಗ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಮತ್ತೊಂದು ಕೇಸ್ ದಾಖಲಿಸಲು ಅನುಮತಿ ನೀಡಿದ್ದಾರೆ.
ಇದು "ಅತ್ಯಂತ ಅಶ್ಲೀಲ ಮತ್ತು ಅಸಹ್ಯಕರ". ಇದು ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ನ್ಯಾಯಾಂಗದ ಮೇಲೆ ಆಕ್ರಮಣ ಮಾಡುವುದರಿಂದ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ.
ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರಯಾಗರಾಜ್ ಮೂಲದ ವಕೀಲ ಅನುಜ್ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


