ಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ: ಲಸಿಕೆ ಹಾಕಿಸಿಕೊಂಡ ಹರಿಯಾಣ ಆರೋಗ್ಯ ಸಚಿವ್ ಅನಿಲ್ ವಿಜ್
ಕೊರೋನಾ ವೈರಸ್ ಗೆ ಲಸಿಕೆ ಕೋವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಶುಕ್ರವಾರ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಂಬಾಲ: ಕೊರೋನಾ ವೈರಸ್ ಗೆ ಲಸಿಕೆ ಕೋವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಶುಕ್ರವಾರ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ.
ಐಸಿಎಂಆರ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಟ್ರಯಲ್ ನಲ್ಲಿದ್ದು, ಸುರಕ್ಷಾ ಹಾಗೂ ಪರಿಣಾಮಕಾರಿತ್ವದ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ.
ಹರಿಯಾಣದಲ್ಲಿ ಇಂದಿನಿಂದ ಮೂರನೇ ಹಂತದ ಪ್ರಯೋಗ ಆರಂಭವಾಗಿದ್ದು, ಅನಿಲ್ ವಿಜ್ ಅವರು ಸ್ವಯಂಸೇವಕರಾಗಿ ಅಂಬಾಲ ಆಸ್ಪತ್ರೆಯಲ್ಲಿ ಮೊದಲ ಲಸಿಕೆಯನ್ನು ಪಡೆದಿದ್ದಾರೆ.
ಭಾರತದ ಕಂಪನಿಯೊಂದು ಕೊರೋನಾ ವೈರಸ್ಗೆ ಲಸಿಕೆ ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ. ಎರಡು ಹಂತಗಳಲ್ಲಿ ಯಶಸ್ವಿ ಪ್ರಯೋಗಗಳು ನಡೆದಿವೆ ಮತ್ತು ಮೂರನೇ ಹಂತ ಇಂದು ಪ್ರಾರಂಭವಾಗಿದೆ. ನಾನು ಮೊದಲ ಸ್ವಯಂಸೇವಕನಾಗಲು ಅವಕಾಶ ಪಡೆದಿದ್ದೇನೆ. ಯಾವುದೇ ಭಯವಿಲ್ಲದ ಜನರು ವ್ಯಾಕ್ಸಿನೇಷನ್ ಪ್ರಯೋಗಗಳಿಗೆ ಮುಂದೆ ಬರಬೇಕು. ಎಲ್ಲವೂ ಸರಿಯಾಗಿ ನಡೆದರೆ, ಈ ಲಸಿಕೆ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ”ಎಂದು ಅನಿಲ್ ವಿಜ್ ಅವರು ಎಎನ್ಐಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


