ದೇಶ

ಶಾರ್ಜಿಲ್‌ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ. ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ

ಶಾರ್ಜಿಲ್‌ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ
ಶಾರ್ಜಿಲ್ ಇಮಾಮ್ - ಉಮರ್ ಖಾಲಿದ್
Published On :

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ.

ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಸೋಮವಾರದ ವರೆಗೆ ವಿಸ್ತರಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಅವರನ್ನು ಬಂಧಿಸಲಾಗಿದೆ.

ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹದ ಹೇಳಿಕೆ ನೀಡಿದ ಆರೋಪದ ಮೇಲೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.