ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.

ಪಣಜಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.
ವಾಯು ಮಾಲಿನ್ಯ ಕಡಿಮೆ ಇರುವ ಪ್ರದೇಶದಲ್ಲಿ ಸಮಯ ಕಳೆಯುವಂತೆ ಈ ಹಿಂದೆ ವೈದ್ಯರು ನೀಡಿದ್ದ ಸಲಹೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಣಜಿಗೆ ಆಗಮಿಸಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಹೆಚ್ಚಿನ ರೀತಿಯ ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರ ನಿರಂತರ ಎದೆ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಗೋವಾಕ್ಕೆ ಬಂದಿದ್ದಾರೆ, ದೆಹಲಿಯಲ್ಲಿನ ಮಾಲಿನ್ಯದ ಕಾರಣ ಅಲ್ಲ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ವಾಯುಮಾಲಿನ್ಯವು ಸೋನಿಯಾ ಗಾಂಧಿಗೆ ಆಸ್ತಮಾ ಮತ್ತು ಎದೆ ಸಮಸ್ಯೆಗೆ ಕಾರಣವಾಗಿದ್ದು, ಅಲ್ಲಿಂದ ಕೆಲಕಾಲ ಬೇರೆಡೆಗೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಕಂಗೆಟ್ಟಿದ ಕೆಲ ನಾಯಕರು, ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಾಮರ್ಶೆ ನಡೆಸುವಂತೆ ಒತ್ತಾಯ ಹೇರಿದ್ದರು. ಈ ನಡುವೆಯೇ ಸೋನಿಯಾ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


