ದೇಶಾದ್ಯಂತ 24 ಗಂಟೆಗಳಲ್ಲಿ 45,882 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 90.04 ಲಕ್ಷ
ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿದೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.

ನವದೆಹಲಿ: ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,28,410ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


