ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ: ಪ್ರಯಾಣಿಕರ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲು ಪಂಜಾಬ್ ರೈತರ ಒಪ್ಪಿಗೆ
ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರೈತ ಸಂಘಟನೆಗಳು ಸೋಮವಾರದಿಂದ ರೈಲು ಸಂಚಾರ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಶನಿವಾರ ಪ್ರಕಟಿಸಿವೆ.

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರೈತ ಸಂಘಟನೆಗಳು ಸೋಮವಾರದಿಂದ ರೈಲು ಸಂಚಾರ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಶನಿವಾರ ಪ್ರಕಟಿಸಿವೆ.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗೆ ವಿವಿಧ ರೈತ ಮುಖಂಡರು ಸಭೆ ನಡೆಸಿದ ಬಳಿಕ ರಾಜ್ಯದಲ್ಲಿ ಪ್ರಯಾಣಿಕ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ.
ಸೋಮವಾರದಿಂದ ರೈಲು ದಿಗ್ಬಂದನವನ್ನು ಸಂಪೂರ್ಣ ತೆಗೆದುಹಾಕುವ ಮೂಲಕ ಸರಕು ಮತ್ತು ಪ್ರಯಾಣಿಕರ ರೈಲುಗಳಿಗೆ ಅವಕಾಶ ಕಲ್ಪಿಸಲು ಪಂಜಾಬ್ ರೈತರು ಮುಖ್ಯಮಂತ್ರಿ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 24 ರಿಂದ ರೈಲು ರೊಕೊ ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘಟನೆಗಳು, ರೈಲು ಹಳಿ ತೆರವಿನ ಜೊತೆಗೆ ಸರಕು ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಈಗಾಗಲೇ ಒಪ್ಪಿಕೊಂಡಿದ್ದವು.
ಆದರೆ, ರೈಲುಗಳನ್ನು ಪುನರ್ ಆರಂಭಿಸುವುದರ ಬಗ್ಗೆ ಪ್ರತಿಭಟನಾ ನಿರತ ರೈತರು ಮತ್ತು ರೈಲ್ವೆ ನಡುವೆ ಗೊಂದಲವು ಮುಂದುವರೆದಿತ್ತು. ಸರಕು ರೈಲುಗಳ ಪುನರ್ ಆರಂಭಕ್ಕೆ ರೈಲ್ವೆ ನಿರಾಕರಿಸಿತ್ತು. ರಾಜ್ಯ ಸರ್ಕಾರದಿಂದ ಸಂಪೂರ್ಣ ಭರವಸೆ ಸಿಗುವವರೆಗೂ ಸರಕು ಮತ್ತು ಪ್ರಯಾಣಿಕರ ರೈಲುಗಳನ್ನು ಓಡಿಸುವುದಿಲ್ಲ ಎಂದು ರೈಲ್ವೆ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


