ದೇಶ

ಭಾರತದಲ್ಲಿ ಇದುವರೆಗೆ 13 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!

ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 13 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಭಾರತದಲ್ಲಿ ಇದುವರೆಗೆ 13 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 13 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ ಮತ್ತು ಸಂಘಟಿತ ಪ್ರಯತ್ನಗಳಿಂದ ದೇಶದಲ್ಲಿ 13,06,57,808 ಜನರನ್ನು ಪರೀಕ್ಷಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಐಸಿಎಂಆರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 10,66,022 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,06,57,808 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. 

ಪರೀಕ್ಷೆ ಪ್ರಮಾಣವನ್ನು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿಸಿರುವುದರಿಂದ ದೃಢಪಟ್ಟ ಪ್ರಕರಣಗಳ ಪ್ರಮಾಣವು ಅಂತಿಮವಾಗಿ ಕುಸಿಯಲಿದೆ.

2020 ರ ಜನವರಿಯಲ್ಲಿ ಪುಣೆಯ ಪ್ರಯೋಗಾಲಯದಲ್ಲಿ ಕೇವಲ ಒಂದು ಪರೀಕ್ಷೆ ನಡೆಸಿದ್ದು, ಇಂದು 13 ಕೋಟಿ ಪರೀಕ್ಷೆಗಳ ಮೈಲಿಗಲ್ಲು ತಲುಪುವಲ್ಲಿ ಭಾರತ ಬಹಳ ದೂರ ಕ್ರಮಿಸಿದೆ. ವಿಸ್ತೃತ ಪ್ರಯೋಗಾಲಯಗಳ ಜಾಲ ಮತ್ತು ಹಲವಾರು ನೀತಿ ಕ್ರಮಗಳ ಮೂಲಕ ದೇಶಾದ್ಯಂತ ಪರೀಕ್ಷಾ ಪ್ರಮಾಣ ಹೆಚ್ಚಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.