ಬಿಹಾರದಲ್ಲಿ ನಕ್ಸಲರ ವಿರುದ್ಧ ಎನ್ ಕೌಂಟರ್; 3 ನಕ್ಸಲರ ಹತ್ಯೆ
ಬಿಹಾರದಲ್ಲಿ ನಕ್ಸಲರ ವಿರುದ್ಧ ಭೀಕರ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂರು ನಕ್ಸಲರು ಸಾವನ್ನಪ್ಪಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ನಕ್ಸಲರ ವಿರುದ್ಧ ಭೀಕರ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂರು ನಕ್ಸಲರು ಸಾವನ್ನಪ್ಪಿದ್ದಾರೆ.
ಶನಿವಾರ ತಡರಾತ್ರಿ ಈ ಎನ್ ಕೌಂಟರ್ ನಡೆದಿದ್ದು, ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ ಈ ಎನ್ ಕೌಂಟರ್ ನಡೆದಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದವು. ಈ ವೇಳೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳ ತಪಾಸಣೆ ನಡೆಸಿದಾಗ ಮೂವರು ನಕ್ಸಲರ ಶವ ಪತ್ತೆಯಾಗಿದೆ. ಕೋಬ್ರಾ 205 ನೇ ಬೆಟಾಲಿಯನ್ ನೇತೃತ್ವದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಬಿಹಾರ ಪೊಲೀಸ್ ಸಿಬ್ಬಂದಿಯ ಸಹಯೋಗದೊಂದಿಗೆ ಕಾರ್ಯಾಚರಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


