ದೇಶ

ವಿಷಾಹಾರ ಸೇವನೆ: ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ 78 ಹಸುಗಳ ಸಾವು!

ಶಂಕಿತ ವಿಷಾಹಾರ ಸೇವನೆಯಿಂದಾಗಿ ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ 75 ಹಸುಗಳ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಷಾಹಾರ ಸೇವನೆ: ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ 78 ಹಸುಗಳ ಸಾವು!
ಗೋಶಾಲೆ (ಸಾಂದರ್ಭಿಕ ಚಿತ್ರ)
Published On :

ಜೈಪುರ: ಶಂಕಿತ ವಿಷಾಹಾರ ಸೇವನೆಯಿಂದಾಗಿ ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ 75 ಹಸುಗಳ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಚುರು ಜಿಲ್ಲೆಯಲ್ಲಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಈ ದುರಂತ ಸಂಭವಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 78 ಹಸುಗಳು ಸಾವನ್ನಪ್ಪಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ರಾಜಸ್ಥಾನದ ಪಶುಸಂಗೋಪನಾ ಅಧಿಕಾರಿಗಳು, ಪರಿಶೀಲನೆ  ನಡೆಸಿದ್ದು, ಮೇಲ್ನೋಟಕ್ಕೆ ಹಸುಗಳ ಸಾವಿಗೆ ವಿಷಾಹಾರ ಕಾರಣ ಎಂದು ಶಂಕಿಸಿದ್ದಾರೆ. 

ಈ ಬಗ್ಗೆ ಮಾಹಿತಿ ನೀಡಿರುವ ರಾಜಸ್ಥಾನ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಗದೀಶ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡ ರಚನೆ ಮಾಡಲಾಗಿದೆ. ರಾಜಸ್ಥಾನದ ಸರ್ದರ್ಶಹರ್‌ನ ಬಿಲ್ಯುಬಾಸ್ ರಾಂಪುರ ಗ್ರಾಮದಲ್ಲಿರುವ ಗೋಶಾಲೆಗೆ ಈ  ತಂಡವನ್ನು ರವಾನೆ ಮಾಡಲಾಗಿದೆ. ಅಂತೆಯೇ ಹಸಗಳು ತಿಂದ ಆಹಾರವನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.