ದೇಶ

ಕೋವಿಡ್-19: ದೇಶದಲ್ಲಿಂದು 45,209 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 90.95 ಲಕ್ಷಕ್ಕೇರಿಕೆ

ದೇಶದಲ್ಲಿ ಭಾನುವಾರ 45,209 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 90,95,807ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 45,209 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 90.95 ಲಕ್ಷಕ್ಕೇರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಭಾನುವಾರ 45,209 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 90,95,807ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 501 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,33,227ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಒಟ್ಟು 90,95,807 ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 43,493 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 85,21,617ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ 4,40,962 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ನಡುವೆ ನಿನ್ನೆ ಒಂದೇ ದಿನ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,78,124ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,39,747 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,75,326 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,17,33,134 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.