ದೇಶ

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
Published On :

ತಿರುವಂತಪುರ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. 

ಶಿಕ್ಷೆ ವಿಧಿಸಲು ಅವಕಾಶವಿರುವ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಸಹಿ ಹಾಕಿದ್ದಾರೆ. 

ಅಪರಾಧಕ್ಕೆ ಪ್ರೇರೇಪಿಸುವ ಅಥವಾ ಯಾರಿಗಾದರೂ ಬೆದರಿಕೆಯೊಡ್ಡುವ ಸಂದೇಶವನ್ನು ಯಾವುದೇ ಮಾಧ್ಯಮದ ಮೂಲಕ ಸಿದ್ಧಪಡಿಸುವುದು, ಕಳಿಸುವುದು, ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಇಂಥವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹ 10,000 ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಕೇರಳ ಪೊಲೀಸ್ ಕಾಯ್ದೆಗೆ ಹೊಸದೊಂದು ಪರಿಚ್ಛೇದ (118 A) ಸೇರಿಸುವ ಈ ವಿಧಿಗೆ ಕೇರಳ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಈ ಕಾನೂನು ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಬಳಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದ್ದು, ಹೊಸ ಕಾನೂನಿಗೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಆದರ, ಕಾನೂನನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಮರ್ಥಿಸಿಕೊಂಡಿದ್ದಾರೆ. 

ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕ ನಿಂದನೆ ಹೆಚ್ಚಾಗುತ್ತಿದೆ. ಈ ಪ್ರವೃತ್ತಿಗೆ ಕಡಿವಾಣ ಹಾಕಲು ಕಾನೂನು ಬೇಕಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.