ಡ್ರಗ್ಸ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್, ಪತಿ ಹರ್ಷ್ ಗೆ ಜಾಮೀನು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ದಂಪತಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಅವರಿಗೆ ತಲಾ 15 ಸಾವಿರ ರೂಪಾಯಿ ಬಾಂಡ್ ಮೇಲೆ ಜಾಮೀನು ನೀಡಿದೆ.
ನಟಿ ಭಾರತಿ ಹಾಗೂ ಅವರ ಪತಿ ಮಾದಕ ಪದಾರ್ಥ ಸೇವಿಸುತ್ತಾರೆ ಎಂಬ ನಿಖರ ಮಾಹಿತಿ ಮೇಲೆ ಶನಿವಾರ ಎನ್ ಸಿಬಿ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ದಂಪತಿಯನ್ನು ಬಂಧಿಸಲಾಗಿತ್ತು.
ಮಾದಕ ಪದಾರ್ಥಗಳಿಗೆ ಸಂಬಂಧಿಸಿದಂತೆ ಎನ್ ಸಿಬಿ ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಪ್ರಸಿದ್ದ ವ್ಯಕ್ತಿಗಳ ಮನೆಗಳಲ್ಲಿ ಸರಣಿ ಶೋಧ ನಡೆಸುತ್ತಿದೆ. ಈ ತಿಂಗಳ ಆರಂಭದಲ್ಲಿ ಎನ್ ಸಿ ಬಿ, ನಟ ಅರ್ಜುನ್ ರಾಂಪಾಲ್, ನಿರ್ಮಾಪಕ ಫಿರೋಜ್ ನಾಡಿಯಾವಾಲಾ ಅವರ ಮನೆಗಳ ಮೇಲೆ ದಾಳಿ ನಡೆಸಿತ್ತು.
ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಮಾಹಿತಿಯಂತೆ ಡ್ರಗ್ಸ್ ಬಳಸುತ್ತಿರುವ ಬಾಲಿವುಡ್ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಎನ್ ಸಿಬಿ ದಾಳಿ ನಡೆಸುತ್ತಿದೆ. ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಹಗರಣ ಸ್ಫೋಟಗೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಸೆಪ್ಟೆಂಬರ್ 9 ರಂದು ಎನ್‌ಸಿಬಿ ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


