ಅಕ್ರಮ ಹಣ ವರ್ಗಾವಣೆ: ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲಿಗೆ ಇಡಿ ನೋಟಿಸ್
ಬೆಂಗಳೂರಿನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಿಪಿಎಂ ಕೇರಳ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ತಿರುವನಂತಪುರ: ಬೆಂಗಳೂರಿನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಿಪಿಎಂ ಕೇರಳ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಈ ನಿಟ್ಟಿನಲ್ಲಿ ಬೆಂಗಳೂರಿನ ಜಾರಿ ನಿರ್ದೇಶನಾಲಯ ಉಪ ನಿರ್ದೇಶಕರು ರಾಜ್ಯ ನೋಂದಣಿ ಇಲಾಖೆಗೆ (ಐಜಿಗೆ) ನೋಟಿಸ್ ನೀಡಿದ್ದು, ಬಿನೀಶ್, ಆತನ ಪತ್ನಿ ರೆನೆಟಾ ಬಿನೀಶ್, ಅನೂಫ್ ಮೊಹಮ್ಮದ್ ಮತ್ತಿತರ ಇತರ ಬೇನಾಮಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇವರ ಆಸ್ತಿಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಾರಿ ನಿರ್ದೇಶನಾಲಯ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


