ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು
ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ.

ಗುವಾಹಟಿ: ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಗೊಗೋಯ್, ಕೊರೋನಾ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಗುವಾಹಟಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಎಂಸಿಎಚ್ ಆಸ್ಪತ್ರೆಯ ಸೂಪರಿಂಡೆಂಟ್ ಅಭಿಜಿತ್ ಶರ್ಮಾ ನೇತೃತ್ವದ ತಂಡ ಗೊಗೋಯ್ ಅವರ ಆರೋಗ್ಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಸದ್ಯ ಗೊಗೋಯ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ನಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಭಿಜಿತ್ ಶರ್ಮಾ ತಿಳಿಸಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಗೊಗೋಯ್ ಅವರು ವೆಂಟಿಲೇಟರ್ ಬೆಂಬಲದಿಂದ ಉಸಿರಾಟ ನಡೆಸುತ್ತಿದ್ದಾರೆ, ಭಾನುವಾರ ಆರು ಗಂಟೆಗಳ ಕಾಲ ಡಯಾಲಿಸಿಸ್ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


