ಚಿತ್ರ ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯತೆ
ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.

ನವದೆಹಲಿ: ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.
ವಿಜಯಶಾಂತಿ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತಿರುವುದರಿಂದ ಡಿಸೆಂಬರ್ 1 ರಂದು ನಡೆಯಲಿರುವ ಜಿಹೆಚ್ ಎಂಸಿಯ 150 ವಾರ್ಡ್ ಗಳ ಚುನಾವಣೆಯ ಪ್ರಚಾರಕ್ಕೆ ಬಲ ಬಂದಂತಾಗಿದೆ.
ವಿಜಯ ಶಾಂತಿ ಬಿಜೆಪಿಗೆ ಸೇರ್ಪಡೆಯಾದರೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯಲಿದ್ದಾರೆ. ಪಕ್ಷದಲ್ಲಿ ಎರಡನೇ ಉನ್ನತ ನಾಯಕರಾದ ಅಮಿತ್ ಶಾ ಅವರ ಸಮ್ಮುಖದಲ್ಲಿ ವಿಜಯ ಶಾಂತಿ ಬಿಜೆಪಿಗೆ ಸೇರಲಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ವಿಜಯಶಾಂತಿ ಬಿಜೆಪಿ ಸೇರ್ಪೆಯಾಗುತ್ತಿದ್ದಂತೆ ಮುಂಬರುವ ಜಿಹೆಚ್ ಎಂಸಿ ಚುನಾವಣೆ ತದನಂತರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
80 ಹಾಗೂ 90ರ ದಶಕದಲ್ಲಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಮಿಂಚಿದ್ದ ವಿಜಯ ಶಾಂತಿ ಧೀರ್ಘಕಾಲದ ವಿರಾಮದ ಬಳಿಕ ಮಹೇಶ್ ಬಾಬು ಅವರ ಸರಿಲೇರು ನೀಕೇವರ ’ಚಿತ್ರದ ಮೂಲಕ ಮತ್ತೆ ಟಾಲಿವುಡ್ ಗೆ ಕಮ್ ಬ್ಯಾಕ್ ಆಗಿದ್ದರು.
ಪ್ರಸ್ತುತ ಕಾಂಗ್ರೆಸ್ ನಲ್ಲಿ ಭವಿಷ್ಯ ಮಂಕಾಗಿರುವ ಪ್ರಸಿದ್ಧ ಮುಖಂಡರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ವಿವೇಚನೆಯುಕ್ತವಾಗಿ ಪ್ರಯತ್ನಿಸುತ್ತಲೇ ಬಂದಿದ್ದು, ಇದೀಗ ವಿಜಯಶಾಂತಿ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


