ದೇಶ

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!

ಲವ್ ಜಿಹಾದ್ ವಿರುದ್ಧದ ಕಾನೂನಿನ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ವಿವಾಹಕ್ಕಾಗಿ ಧಾರ್ಮಿಕ ಮತಾಂತರವಾಗುವುದರ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದೆ

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!
Published On :

ಲಖನೌ ಲವ್ ಜಿಹಾದ್ ವಿರುದ್ಧದ ಕಾನೂನಿನ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ವಿವಾಹಕ್ಕಾಗಿ ಧಾರ್ಮಿಕ ಮತಾಂತರವಾಗುವುದರ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದೆ 

ಅನ್ಯಧರ್ಮೀಯರನ್ನು ಪ್ರೇಮಿಸಿ ವಿವಾಹವಾಗುವುದಕ್ಕೆ ಧಾರ್ಮಿಕ ಮತಾಂತರವಾಗುವುದನ್ನು ಬಿಜೆಪಿ ನಾಯಕರು ಲವ್ ಜಿಹಾದ್ ಎಂದು ಹೇಳುತ್ತಿದ್ದು, ಅದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ಕಠಿಣ ಕಾನೂನನ್ನು ಜಾರಿಗೊಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ದೀರ್ಘಕಾಲದಿಂದಲೂ ಲವ್ ಜಿಹಾದ್ ವಿರುದ್ಧ ಮಾತನಾಡುತ್ತಿದ್ದರು. ಈಗ ಅದರ ವಿರುದ್ಧ ಕಾನೂನು ರೂಪಿಸಿ ಜಾರಿಗೆ ತಂದಿರುವ ಮೊದಲ ಮುಖ್ಯಮಂತ್ರಿಯೂ ಆಗಿದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.