ಜೈಲಿನಿಂದಲೇ ಬಿಹಾರ ಸರ್ಕಾರ ಕೆಡವಲು ಲಾಲೂ ಪ್ರಸಾದ್ ಸಂಚು: ಸುಶೀಲ್ ಮೋದಿ ಆರೋಪ
ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಾಟ್ನಾ: ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಎನ್ ಡಿ ಎ ಶಾಸಕರನ್ನು ಖರೀದಿಸಿ, ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ಸರ್ಕಾರವನ್ನು ಉರುಳಿಸಲು ಲಾಲು ಪ್ರಸಾದ್ ಯಾದವ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಹೀಗೆ ಶಾಸಕರನ್ನು ಖರೀದಿಸಿ, ಮಹಾಘಟ್ ಬಂಧನ್ ಗೆ ನೆರವಾಗಲು ಲಾಲೂ ಪ್ರಸಾದ್ ಪ್ರಯತ್ನಿಸುತ್ತಿದ್ದಾರೆ ಎಂದು ಸುಶೀಲ್ ಮೋದಿ ಆರೋಪಿಸಿದ್ದಾರೆ.
“8051216302” ದೂರವಾಣಿ ಸಂಖ್ಯೆಯಿಂದ ಲಾಲೂ ಪ್ರಸಾದ್ ಯಾದವ್ ಎನ್‌ಡಿಎ ಶಾಸಕರಿಗೆ ಕರೆ ಮಾಡುತ್ತಿದ್ದಾರೆ. ಸಚಿವ ಸ್ಥಾನ ಖಚಿತ ಎಂದು ಭರವಸೆ ನೀಡುತ್ತಿದ್ದಾರೆ. ನಾನು ದೂರವಾಣಿ ಮಾಡಿದಾಗ ಲಾಲು ಪ್ರಸಾದ್ ಯಾದವ್ ಫೋನ್ ಎತ್ತಿಕೊಂಡರು. ಜೈಲಿನಿಂದ ಇಂತಹ ಚಿಲ್ಲರೆ ರಾಜಕೀಯ ಮಾಡಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಈ ಪ್ರಯತ್ನದಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಕೂಡಾ ನಾನು ಲಾಲೂಗೆ ಹೇಳಿದ್ದೇನೆ ಎಂದು ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಮೇವು ಹಗರಣದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ತಮ್ಮ ಪ್ರಭಾವವನ್ನೇನು ಕಳೆದುಕೊಂಡಿಲ್ಲ. ಅವರು ಎನ್ ಡಿ ಎ ಶಾಸಕರನ್ನು ಖರೀದಿಸಿದರೂ ಯಾರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಮೋದಿ ಹೇಳಿದ್ದಾರೆ.
ರಾಂಚಿಯಿಂದ ಲಾಲು ಪ್ರಸಾದ್ ಯಾದವ್ ಎನ್‌ಡಿಎ ಶಾಸಕರಿಗೆ ಫೋನ್ ಕರೆ ಮಾಡುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನದ ಆಮಿಷವೊಡ್ಡುತ್ತಿದ್ದಾರೆ ಎಂದು ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


