ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ
ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

ನವದೆಹಲಿ: ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.
ವಾಣಿಜ್ಯ ವಿಮಾನಗಳ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆಯಾದರೂ ಡಿಜಿಸಿಎ ಅನುಮೋದಿತ ವಿಮಾಗಳು ಎಲ್ಲಾ ಸರಕು ವಿಮಾನಳ ಕಾರ್ಯಾಚರಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.
ಪ್ರಾಧಿಕಾರದ ಅನುಮೋದನೆ ಪಡೆದುಕೊಂಡ ಪೂರ್ವನಿಗದಿತ ವಿಮಾನಗಳ ಕಾರ್ಯಾಚರಣೆಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಸ್ತುತ ಭಾರತ ಹಲವು ರಾಷ್ಟ್ರಗಳೊಂದಿಗೆ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರ ಪ್ರಕಾರ ಉಭಯ ದೇಶಗಳ ನಾಗರಿಗರು ವಿಮಾನದಲ್ಲಿ ಪರಸ್ಪರ ಎರಡೂ ಪ್ರದೇಶಗಳಿಗೆ ಸಂಚರಿಸಬಹುದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾ.25 ರಂದು ಎಲ್ಲಾ ಪ್ರಯಾಣೀಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮೇ.25 ರಂದು ದೇಶೀಯ ವಿಮಾನಗಳ ಸಂಚಾರವನ್ನು ಪುನಾರಂಭಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


