ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ: ಜಮ್ಮು-ಕಾಶ್ಮೀರ ಚುನಾವಣಾ ಆಯುಕ್ತ
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ, ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಚುನಾವಣಾ ಆಯುಕ್ತ ಕೆಕೆ ಶರ್ಮಾ, ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ. ಅವರು ಪುಲ್ವಾಮಕ್ಕೆ ತೆರಳುವವರಿದ್ದರು. ಆದರೆ ಭದ್ರತಾ ದೃಷ್ಟಿಯಿಂದ ಪುಲ್ವಾಮಗೆ ತೆರಳಬೇಡಿ ಎಂದಷ್ಟೇ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಎನ್ಐಎ ವಶಕ್ಕೆ ಪಡೆದಿರುವ ಪಿಡಿಪಿ ನಾಯಕ ವಾಹೀದ್ ಪರ್ರಾ ಅವರ ಪುಲ್ವಾಮದಲ್ಲಿರುವ ನಿವಾಸಕ್ಕೆ ಮೆಹಬೂಬಾ ಮುಫ್ತಿ ಭೇಟಿ ನೀಡುವವರಿದ್ದರು. ಆದರೆ ಇದಕ್ಕೆ ಅವಕಾಶ ನೀಡಲಾಗಿಲ್ಲ.
ನ.27 ರಂದು ಮೆಹಬೂಬಾ ಮುಫ್ತಿ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವುದಕ್ಕೆ ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದ್ದರು.
Related Article
ಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪ
ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಗೆ ಹಿನ್ನಡೆ: ಮೂವರು ಪಿಡಿಪಿ ನಾಯಕರ ರಾಜೀನಾಮೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


