ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ರಕ್ಷಣಾ ಕಾರ್ಯದರ್ಶಿಗಳನ್ನೂ ಭೇಟಿ ಮಾಡಿರುವ ಅಜಿತ್ ದೋವಲ್, ಪ್ರಾದೇಶಿಕವಾಗಿ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಸಂಬಂಧ ಮಹತ್ವದ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಮಾಲ್ಡೀವ್ಸ್, ಲಂಕಾ, ಭಾರತದ ತ್ರಿಪಕ್ಷೀಯ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯನ್ನು ಲಂಕಾ ಆಯೋಜಿಸಿದ್ದು ಈ ಸಭೆಯಲ್ಲಿ ದೋವಲ್ ಭಾಗಿಯಾಗಲಿದ್ದಾರೆ. ಕಡಲ ಭದ್ರತಾ ಸಹಕಾರದ ಕುರಿತು ಸಭೆಯಲ್ಲಿ ಮಹತ್ವದ ಮಾತುಕತೆ ನಡೆಯುವ ನಿರೀಕ್ಷೆ ಇದೆ.
6 ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಸಭೆಯ ಬಳಿಕ ಇದೇ ಮೊದಲ ಬಾರಿಗೆ ಕಡಲ ಭದ್ರತಾ ಸಹಕಾರದ ಸಭೆ ಆಯೋಜನೆಯಾಗುತ್ತಿದೆ. ಅಜಿತ್ ದೋವಲ್ ವರ್ಷದಲ್ಲಿ ಎರಡನೇ ಬಾರಿಗೆ ಲಂಕಾಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಜನವರಿಯಲ್ಲಿ ದೋವಲ್ ಲಂಕಾಗೆ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


