ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್
ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಪಾಟ್ನಾ: ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಿತೀಶ್ ಕುಮಾರ್ ತಮ್ಮ ವಿರುದ್ಧ ಕಳೆದ ಎರಡು ದಿನಗಳಿಂದ ತೇಜಸ್ವಿ ಯಾದವ್ ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖ ಮಾಡುತ್ತಿರುವುದಕ್ಕೆ ಆಕ್ರೋಶಿತರಾದ ಅವರು ತೇಜಸ್ವಿ ಯಾದವ್ ಲಾಲೂ ಪ್ರಸಾದ್ ಯಾದವ್ ಅವರ ಮಗ ಎಂಬ ಕಾರಣಕ್ಕೆ ಎಲ್ಲವನ್ನು ತಾಳ್ಮೆಯಿಂದ ಆಲಿಸುತ್ತಿದ್ದೇನೆ ಎಂದು ಗುಡುಗಿದರು.
ನಿಮ್ಮ ತಂದೆಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಿದ್ದು ಯಾರು, ನಿಮ್ಮನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಯಾರು ಎಂದು ತಿಳಿದುಕೊಂಡು ಮಾತನಾಡಲಿ ಎಂದು ತೇಜಸ್ವಿ ಯಾದವ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ನಿತೀಶ್ ಕುಮಾರ್ ಅವರು 7ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಕೋಲಾಹಲಕ್ಕೆ ಬಿಹಾರ ವಿಧಾನಸಭೆ ಸಾಕ್ಷಿಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


