ದೇಶ

ಬಿಹಾರ: ಪಕ್ಷ ಸೇರಿದ ಎರಡು ದಿನದಲ್ಲೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಬಿಜೆಪಿ ಮುಖಂಡನನ್ನು ಹಾಡುಹಗಲೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬಿಹಾರ: ಪಕ್ಷ ಸೇರಿದ ಎರಡು ದಿನದಲ್ಲೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ರಾಜೇಶ್ ಕುಮಾರ್ ಜಾ
Published On :

ಪಾಟ್ನ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಬಿಜೆಪಿ ಮುಖಂಡನನ್ನು ಹಾಡುಹಗಲೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಜಯಂತ್ ಮಂಡಳದ ಬಿಜೆಪಿ ಪಕ್ಷದ ಉಪಾಧ್ಯಕ್ಷ ರಾಜೇಶ್ ಕುಮಾರ್ ಜಾ ಅಲಿಯಾಸ್ ರಾಜು ಬಾಬಾರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ತೇಜ್ ಪ್ರತಾಪ್ ನಗರ ಪ್ರದೇಶದ ಸೀತಾರಾಮ್ ಎಂಟರ್ ಟೈನ್ಮೆಂಟ್ ಹಾಲ್ ಬಳಿ ಘಟನೆ ನಡೆಸಿದೆ. ಇನ್ನು ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಮಾಹಿತಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ದೌಡಿಯಿಸಿ ಪರಿಶೀಲನೆ ನಡೆಸಿದರು. ಇನ್ನು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. 

ಎರಡು ದಿನಗಳ ಹಿಂದಷ್ಟೇ ರಾಜೇಶ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮುಂಜಾನೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಅಪರಿಚಿತರು ರಾಜೇಶ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.