ದಲಿತ ಯುವತಿ ಮೇಲಿನ ಅತ್ಯಾಚಾರವನ್ನು ಆಸ್ಪತ್ರೆ ವರದಿಗಳು ಖಚಿತಪಡಿಸಿಲ್ಲ: ಹತ್ರಾಸ್ ಎಸ್ ಪಿ
ನಾಲ್ವರು ಮೇಲ್ಜಾತಿಯ ಯುವಕರಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಹತ್ರಾಸ್ ನ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಆಲಿಘಡ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಖಚಿತಪಡಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ವಿಕ್ರಾಂತ್ ವಿರ್ ಗುರುವಾರ ತಿಳಿಸಿದ್ದಾರೆ.

ಹತ್ರಾಸ್: ನಾಲ್ವರು ಮೇಲ್ಜಾತಿಯ ಯುವಕರಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಹತ್ರಾಸ್ ನ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಆಲಿಘಡ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಖಚಿತಪಡಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ವಿಕ್ರಾಂತ್ ವಿರ್ ಗುರುವಾರ ತಿಳಿಸಿದ್ದಾರೆ.
ಯುವತಿಗೆ ಗಾಯಗಳಾಗಿರುವ ಬಗ್ಗೆ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜಿನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಬಲವಂತದ ಲೈಂಗಿಕ ಕಿರುಕುಳದ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಾಗಿ ಕಾಯುತ್ತಿದ್ದೇವೆ. ವೈದ್ಯರು ಕೂಡಾ ಅತ್ಯಾಚಾರದ ಬಗ್ಗೆ ಖಚಿತಪಡಿಸಿಲ್ಲ ಎಂದು ಅವರು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯ ಸಪ್ಧರ್ ಜಂಗ್ ಆಸ್ಪತ್ರೆಯಲ್ಲಿ 19 ವರ್ಷದ ಯುವತಿ ಮೃತಪಡುವ ಮುನ್ನ ಆಲಿಘಡ ಮುಸ್ಲಿಂ ವೈದ್ಯಕೀಯ ಕಾಲೇಜಿನಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗಿತ್ತು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶೇಷ ತನಿಖಾ ತಂಡವನ್ನು ರಚಿಸಿದ್ದು,ಆ ತಂಡ ಬುಧವಾರ ಸಂತ್ರಸ್ಥೆಯ ಗ್ರಾಮಕ್ಕೆ ಭೇಟಿ ನೀಡಿದ್ದು, ಕುಟುಂಬದವರೊಂದಿಗೆ ಮಾತುಕತೆ ನಡೆಸಿದೆ. ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಹತ್ರಾಸ್ ಗಡಿ ಭಾಗವನ್ನು ಮುಚ್ಚಲಾಗಿದ್ದು, ಜಿಲ್ಲೆಯಲ್ಲಿ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹತ್ರಾಸ್ ನಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮಾಧ್ಯಮಗಳಿಗೂ ಕೂಡಾ ಅವಕಾಶ ನಿರಾಕರಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.
ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಮೃತಪಟ್ಟ ಯುವತಿಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ , ಮನೆ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗವನ್ನು ನೀಡುವುದಾಗಿ ಘೋಷಣೆ ಮಾಡಿದೆ. ತೀವ್ರಗತಿಯ ನ್ಯಾಯಾಲಯದಿಂದ ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಸರ್ಕಾರ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


