ಕೋವಿಡ್-19: 'ಅಸಮರ್ಪಕ ನಿರ್ವಹಣೆ' ಕುರಿತು ಸ್ವತಂತ್ರ ತನಿಖೆಗಾಗಿ ಸಲ್ಲಿಸಿದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸರ್ಕಾರ ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂದು ಆರೋಪಿಸಿ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸರ್ಕಾರ ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂದು ಆರೋಪಿಸಿ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಕೇಂದ್ರ ಗೃಹ ಸಚಿವಾಲಯ ಫೆಬ್ರವರಿ 4 ರಂದೇ ಸಲಹೆಗಳನ್ನು ಹೊರಡಿಸಿದೆ ಆದರೆ, ಮಾರ್ಚ್ 4ರವರೆಗೂ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ನಡೆಸಿಲ್ಲ ಎಂದು ನ್ಯಾಯಾಧೀಶ ಎಲ್.ಎನ್. ರಾವ್ ನೇತೃತ್ವದ ನ್ಯಾಯಪೀಠ, ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಹೇಳಿತು.
ಕೇಂದ್ರ ಗೃಹ ಸಚಿವಾಲಯದ ಸಲಹೆಯ ಹೊರತಾಗಿಯೂ ಫೆಬ್ರವರಿ 24 ರಂದು ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ 1 ಲಕ್ಷ ಜನರು ಸೇರಲು ಅವಕಾಶ ಮಾಡಿಕೊಡಲಾಗಿತ್ತು ಎಂದು ಪ್ರಶಾಂತ್ ಭೂಷಣ್ ಹೇಳಿದರು.
ಲಾಕ್ ಡೌನ್ ವಿರುದ್ಧ ತಜ್ಞರು ನೀಡಿರುವ ಸಲಹೆಗಳನ್ನು ಸಲ್ಲಿಸಿದ ಪ್ರಶಾಂತ್ ಭೂಷಣ್, ಲಾಕ್ ಡೌನ್ ಕಾರಣದಿಂದ ಜಿಡಿಪಿ ಅಭೂತಪೂರ್ವ ಶೇಕಡಾ 23 ರಷ್ಟು ಕಡಿಮೆಯಾಗಿದೆ. ದೇಶದ ಆರ್ಥಿಕತೆ ನಾಶವಾಗಿದೆ. ಕೋಟ್ಯಂತರ ಉದ್ಯೋಗ ನಷ್ಟವಾಗಿದೆ ಎಂದು ಹೇಳಿದರು.
ಇದು ಸಾರ್ವಜನಿಕವಾಗಿ ಚರ್ಚೆಯಾಗಬೇಕಾದ ವಿಷಯವಾಗಿದ್ದು, ಈ ವಿಷಯದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿತು. ಸರ್ಕಾರವು ಇದನ್ನು ಪರಿಶೀಲಿಸಬೇಕಾದ ವಿಷಯಗಳು ಎಂದು ನ್ಯಾಯಾಲಯ ತಿಳಿಸಿತು
ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅರ್ಜಿದಾರರು, 1952ರ ತನಿಖಾ ಕಾಯ್ದೆಯಡಿ ನೇಮಕಗೊಂಡ ಆಯೋಗದಿಂದ ಸ್ವತಂತ್ರವಾದ ತನಿಖೆ ನಡೆಯಬೇಕೆಂದು ನ್ಯಾಯಾಲಯವನ್ನು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


