ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 86,821 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 63 ಲಕ್ಷ, 98,678 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳಲ್ಲಿ 86,821 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 86,821 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 63 ಲಕ್ಷ, 98,678 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳಲ್ಲಿ 86,821 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 1,181 ಮಂದಿ ಮಹಾಮಾರಿ ವೈರಸ್ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಸಾವಿನ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಪತ್ತೆಯಾಗಿರುವ ಒಟ್ಟು 63,12,585 ಮಂದಿ ಸೋಂಕಿತರ ಪೈಕಿ 52,73,202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 9,40,705 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.