ದೇಶ

ದೇಶದಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ: ಜಾಗತಿಕ ಮಟ್ಟದಲ್ಲಿ ಸ್ಥಾನ ಕಾಯ್ದುಕೊಂಡ ಭಾರತ

ಭಾರತದಲ್ಲಿ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ: ಜಾಗತಿಕ ಮಟ್ಟದಲ್ಲಿ ಸ್ಥಾನ ಕಾಯ್ದುಕೊಂಡ ಭಾರತ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೂ 52 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಾಗತಿಕ ಮಟ್ಟದಲ್ಲಿ ಅತೀ ಹೆಚ್ಚು ಚೇತರಿಗೆ ಪ್ರಮಾಣವನ್ನು ಹೊಂದಿರುವ ರಾಷ್ಟ್ರವಾಗಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ದೇಶದಲ್ಲಿ 10 ಲಕ್ಷಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. 

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮರಣ ಪ್ರಮಾಣ ಕಡಿಮೆಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಚೇತರಿಕೆ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.