ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 81,484 ಕೇಸ್ ಪತ್ತೆ, 1.095 ಮಂದಿ ಸಾವು
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 81,484 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 81,484 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ನಿನ್ನೆ ಒಂದೇ ದಿನ 1,095 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 99,773ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 63,94,069 ಮಂದಿ ಒಟ್ಟು ಸೋಂಕಿತರ ಪೈಕಿ ಭಾರತದಲ್ಲಿ ಈ ವರೆಗೂ 53,52,078 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,42,217 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


