ಹತ್ರಾಸ್: ಎಸ್ ಐಟಿ ತನಿಖೆ ಪೂರ್ಣ; ಗ್ರಾಮಕ್ಕೆ ಮಾಧ್ಯಮ ಪ್ರವೇಶಕ್ಕೆ ಅನುಮತಿ
ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಾಳ (ಎಸ್ಐಟಿ) ಪೂರ್ಣಗೊಳಿಸಿದ್ದು, ಸಂತ್ರಸ್ತ ದಲಿತ ಯುವತಿಯ ಗ್ರಾಮಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಹತ್ರಾಸ್: ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಾಳ (ಎಸ್ಐಟಿ) ಪೂರ್ಣಗೊಳಿಸಿದ್ದು, ಸಂತ್ರಸ್ತ ದಲಿತ ಯುವತಿಯ ಗ್ರಾಮಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಹತ್ರಾಸ್ ನ ಜಿಲ್ಲಾಡಳಿತ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಮಾಧ್ಯಮಗಳ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.
ಎಸ್ಐಟಿ ತನಿಖೆ ಹಿನ್ನೆಲೆಯಲ್ಲಿ ಆ ಗ್ರಾಮಕ್ಕೆ ಹೊರಗಿನಿಂದ ಬರುವವರನ್ನು ಹಾಗೂ ಮಾಧ್ಯಮಗಳ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ಈಗ ಎಸ್ಐಟಿ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಜಂಟಿ ಮ್ಯಾಜಿಸ್ಟ್ರೇಟ್ ಪ್ರೇಮ್ ಪ್ರಕಾಶ್ ಮೀನಾ ಹೇಳಿದ್ದಾರೆ. ಸಂತ್ರಸ್ತ ಯುವತಿಯ ಕುಟುಂಬಕ್ಕೆ ನಿರ್ಬಂಧ ವಿಧಿಸಿ, ಅವರ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂಬ ಅಂಶವನ್ನೂ ಪ್ರೇಮ್ ಪ್ರಕಾಶ್ ಮೀನಾ ತಳ್ಳಿಹಾಕಿದ್ದಾರೆ.
ಹತ್ರಾಸ್ ಅತ್ಯಾಚಾರ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಈ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್ಐಟಿ ರಚನೆ ಮಾಡಿದ್ದ ಅ.14 ರೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೇ ವೇಳೆ ಉತ್ತರ ಪ್ರದೇಶದ ಹಿರಿಯ ಅಧಿಕಾರಿಗಳು ಸಂತ್ರಸ್ತ ಯುವತಿಯ ಪೋಷಕರನ್ನು ಭೇಟಿ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


