ರಾಹುಲ್ ಗಾಂಧಿ ನೇತೃತ್ವದ ನಿಯೋಗದಿಂದ ಇಂದು ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಭೇಟಿ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.
ಪಕ್ಷದ ಸಂಸದರೊಂದಿಗೆ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಹತ್ರಾಸ್ ಗೆ ಭೇಟಿ ನೀಡಲಿದ್ದು, ಬರ್ಬರ ರೀತಿಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿರುವ 19 ವರ್ಷದ ಹೆಣ್ಣುಮಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಈ ಮಧ್ಯೆ ಹತ್ರಾಸ್ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಗ್ರಾಮವನ್ನು ಬ್ಲಾಕ್ ಮಾಡಿರುವ ಪೊಲೀಸರು, ಮಾಧ್ಯಮಗಳಿಗೂ ಅವಕಾಶ ನೀಡುತ್ತಿಲ್ಲ.ಆದಾಗ್ಯೂ, ಖಾಸಗಿ ಚಾನೆಲ್ ವೊಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರನ್ನು ಭೇಟಿ ಮಾಡಿದ್ದು, ತಮ್ಮನ್ನು ಭಾರೀ ಪೊಲೀಸ್ ಭದ್ರತೆಯಲ್ಲಿ ಇಡಲಾಗಿದೆ. ಅಧಿಕ ಒತ್ತಡ ಹಾಗೂ ಭಯದಲ್ಲಿ ಬದುಕುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


