ದೇಶ

ಉತ್ತರ ಪ್ರದೇಶ: ಕೊನೆಗೂ ಹತ್ರಾಸ್ ಗೆ ಭೇಟಿ ನೀಡಲು ಪ್ರಿಯಾಂಕಾ, ರಾಹುಲ್ ಗಾಂಧಿಗೆ ಅನುಮತಿ

ಉತ್ತರ ಪ್ರದೇಶ ಸರ್ಕಾರ ಕೊನೆಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಭೇಟಿ ಮಾಡಲು ಶನಿವಾರ ಅನುಮತಿ ನೀಡಿದೆ.

ಉತ್ತರ ಪ್ರದೇಶ: ಕೊನೆಗೂ ಹತ್ರಾಸ್ ಗೆ ಭೇಟಿ ನೀಡಲು ಪ್ರಿಯಾಂಕಾ, ರಾಹುಲ್ ಗಾಂಧಿಗೆ ಅನುಮತಿ
ಪ್ರಿಯಾಂಕಾ - ರಾಹುಲ್ ಗಾಂಧಿ
Published On :

ನವದೆಹಲಿ: ಉತ್ತರ ಪ್ರದೇಶ ಸರ್ಕಾರ ಕೊನೆಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಭೇಟಿ ಮಾಡಲು ಶನಿವಾರ ಅನುಮತಿ ನೀಡಿದೆ.

ಕಳೆದ ಗುರುವಾರ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದ ಈ ಇಬ್ಬರು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು. 

ಇಂದು ಮತ್ತೆ ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ದೆಹಲಿ- ನೋಯ್ಡಾ ಗಡಿಯಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಆದರೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದರು.ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅನುಮತಿ ನೀಡಲಾಗಿದೆ.

ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.