ದೇಶ

ದಲಿತ ಮುಖಂಡನ ಕೊಲೆ: ಆರ್ಜೆಡಿ ಮುಖಂಡ ತೇಜಸ್ವಿ ಪ್ರಸಾದ್, ಇತರರ ವಿರುದ್ಧ ಎಫ್ಐಆರ್

ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ದಲಿತ ಮುಖಂಡ ಶಕ್ತಿ ಮಲಿಕ್ ಹತ್ಯೆಗೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡರಾದ ತೇಜಸ್ವಿ ಪ್ರಸಾದ್ ಯಾದವ್, ತೇಜ್ ಪ್ರತಾಪ್ ಯಾದವ್ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತ ಮುಖಂಡನ ಕೊಲೆ: ಆರ್ಜೆಡಿ ಮುಖಂಡ ತೇಜಸ್ವಿ ಪ್ರಸಾದ್, ಇತರರ ವಿರುದ್ಧ ಎಫ್ಐಆರ್
ತೇಜ್ ಪ್ರತಾಪ್-ತೇಜಸ್ವಿ ಪ್ರಸಾದ್
Published On :

ಪಾಟ್ನಾ: ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ದಲಿತ ಮುಖಂಡ ಶಕ್ತಿ ಮಲಿಕ್ ಹತ್ಯೆಗೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡರಾದ ತೇಜಸ್ವಿ ಪ್ರಸಾದ್ ಯಾದವ್, ತೇಜ್ ಪ್ರತಾಪ್ ಯಾದವ್ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ರಾಣಿಗಂಜ್ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲು ತೇಜಶ್ವಿ ಪ್ರಸಾದ್ ಯಾದವ್ ಅವರು 50 ಲಕ್ಷ ರೂಪಾಯಿ ದೇಣಿಗೆ ನೀಡುವಂತೆ ಒತ್ತಾಯಿಸಿದ್ದರು ಎಂದು ಶಕ್ತಿ ಮಲಿಕ್ ಆರೋಪಿಸಿದ ಬೆನ್ನಲ್ಲೇ ಈ ಹತ್ಯೆ ನಡೆಸಿದೆ.

ಕೊಲೆಗೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡ ತೇಜಶ್ವಿ ಪ್ರಸಾದ್ ಯಾದವ್ ಮತ್ತು ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೂರ್ನಿಯಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಶರ್ಮಾ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಲ್ಲಿ ಶಕ್ತಿ ಮಲಿಕ್ ಮಲಗಿದ್ದಾಗ ಮೂವರು ಅಪರಿಚಿತರು ಬೈಕ್‌ ನಲ್ಲಿ ಬಂದು ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಗುಂಡೇಟಿನಿಂದ ಮಲಿಕ್ ಸ್ಥಳದಲ್ಲೇ ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.