ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯ
ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ.

ಲಖನೌ: ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ.
ಘಟನೆ ಬಗ್ಗೆ ಸಿಬಿಐ ತನಿಖೆಗೆ ಬಿಎಸ್ ಪಿ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದರು. ಆದರೆ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಆಕೆ ಬಯಸಿರುವುದಾಗಿ ಬದೌರಿಯಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ತನಿಖೆಗೆ ನಿಯೋಜಿಸುವುದರಿಂದ ಸಂತ್ರಸ್ತೆಯ ಪೋಷಕರು, ಸಮಾಜದಲ್ಲಿನ ಅನೇಕ ಜನರಿಗೆ ಪ್ರಾಮಾಣಿಕ ತನಿಖೆ ಬಗ್ಗೆ ಖಾತ್ರಿಯಾಗಲಿದ್ದು, ಆರೋಪಿಗಳಿಗೆ ಶಿಕ್ಷೆ ಕೊಡಿಸಬಹುದಾಗಿದೆ ಎಂದು ಬದೌರಿಯಾ ಹೇಳಿದ್ದಾರೆ.
ಹತ್ರಾಸ್ ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶದ ಜ್ವಾಲೆ ಎದಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಜನತೆ ಸಿಡಿದೆದಿದ್ದಾರೆ. ವಿಶೇಷವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರ ನಡೆಯ ಬಗ್ಗೆಯೂ ಜನತೆಯಲ್ಲಿ ಆಕ್ರೋಶ ಮಡುಗಟ್ಟಿರುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


