ಹಥ್ರಾಸ್ ವಿವಾದದ ನಡುವೆಯೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಕ್ರೌರ್ಯ, ತುಂಡರಿಸಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಕ್ರೌರ್ಯ ಮುಂದುವರೆದಿದ್ದು, ಹಥ್ರಾಸ್ ಸಾಮೂಹಿಕ ವಿವಾದದ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಾಗಲೇ 20 ವರ್ಷದ ಯುವತಿಯೊಬ್ಬಳ ದೇಹ ತುಂಡರಿಸಿರುವ ಘಟನೆ ವರದಿಯಾಗಿದೆ.

ಲಖನೌ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಕ್ರೌರ್ಯ ಮುಂದುವರೆದಿದ್ದು, ಹಥ್ರಾಸ್ ಸಾಮೂಹಿಕ ವಿವಾದದ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಾಗಲೇ 20 ವರ್ಷದ ಯುವತಿಯೊಬ್ಬಳ ದೇಹ ತುಂಡರಿಸಿರುವ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಹೊರವಲಯದ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ದೇಹ ತುಂಡರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಗೆ ಸುಮಾರು 20 ವರ್ಷ ಎಂದು ಅಂದಾಜಿಸಲಾಗಿದೆ. ಇನ್ನು ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕಿದ್ದು, ಮೃತ ಯುವತಿ ಕಳೆದ ಸೆಪ್ಟೆಂಬರ್ 26ರಂದು ನಾಪತ್ತೆಯಾಗಿದ್ದಳು ಎಂದು ಹೇಳಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿ ಕುಟುಂಬದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಅಂತೆಯೇ ಯುವತಿ ದೇಹದ ಕೆಲ ಭಾಗಗಳನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ರವಾನಿಸಿದ್ದು, ಕೃತ್ಯಕ್ಕೆ ಕೌಟುಂಬಿಕ ಆಸ್ತಿ ವಿವಾದ ಕಾರಣ ಎನ್ನಲಾಗಿದೆ. ಮೃತ ಯುವತಿ ತಂದೆ ಹೇಳುವಂತೆ ತಮ್ಮ ಕುಟುಂಬದ ಕೃಷಿ ಭೂಮಿಗೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ನನ್ನ ಮಗಳನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು. ಈ ಬಗ್ಗೆ ನಾನು ಪೊಲೀಸ್ ದೂರು ಕೂಡ ನೀಡಿದ್ದೆ ಎಂದು ಹೇಳಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾನ್ಪುರ್ ಎಸ್ ಪಿ ಕೆಕೆ ಚೌದರಿ ಅವರು, ಯುವತಿ ತಂದೆ ನೀಡಿರುವ ದೂರಿನ ಅನ್ವಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


