ದೇಶ

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ಮನೀಶ್ ಶುಕ್ಲ
Published On :

ಕೋಲ್ಕತ್ತಾ: ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.

ಸ್ಥಳೀಯ ಕೌನ್ಸಿಲರ್ ಮನೀಶ್ ಶುಕ್ಲಾ ಎಂಬುವವರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿ ಟಿ ರಸ್ತೆ ಬಳಿ ನಿನ್ನೆ ಸಾಯಂಕಾಲ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಹಿಂದೆ ತೃಣಮೂಲ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮಾತ್ರ ಅದನ್ನು ಅಲ್ಲಗಳೆದಿದೆ.

ಟಿಎಂಸಿ ನಾಯಕರು ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಅಸಹ್ಯಕರ ಸಂಗತಿ. ಸ್ಥಳೀಯ ಪೊಲೀಸರು ಈ ಪ್ರಕರಣದ ವಿಚಾರಣೆಯನ್ನು ಸರಿಯಾಗಿ ನಡೆಸುತ್ತಾರೆ ಎಂಬ ನಂಬಿಕೆ ನಮಗಿಲ್ಲ. ನಾವು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.