ಇದೇ ಮೊದಲು: ಬಿಹಾರ ಚುನಾವಣೆಗೆ ಅಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ
ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ನೇಮಕ ಮಾಡಲಾಗಿದೆ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ನೇಮಕ ಮಾಡಲಾಗಿದೆ.
ಮೋನಿಕಾ ದಾಸ್ ನೇಮಕಗೊಂಡ ಅಧಿಕಾರಿಯಾಗಿದ್ದು, ಅ.28 ರಂದು ನಡೆಯಲಿರುವ ಚುನಾವಣೆಗೆ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. 32 ವರ್ಷದ ಮೋನಿಕಾ ದಾಸ್ ಪಾಟ್ನಾ ವಿವಿಯಲ್ಲಿ ಚಿನ್ನದ ಪದಕ ಗೆದ್ದ ವಿದ್ಯಾರ್ಥಿಯಾಗಿದ್ದಾರೆ. 2015 ರಿಂದ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಕೆಲಸ ಮಾಡಿದ ಮೊದಲ ತೃತೀಯ ಲಿಂಗಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ ಮೋನಿಕಾ ದಾಸ್
ಯಾವುದೇ ರಾಜ್ಯದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ತೃತೀಯ ಲಿಂಗಿ ಅಧಿಕಾರಿಯೊಬ್ಬರನ್ನು ನೇಮಕ ಮಾಡಿರುವ ಐತಿಹಾಸಿಕ ದಾಖಲೆ ಬಿಹಾರ ಹೊಂದಿದೆ.
2016 ರಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ರಿಯಾ ಸರ್ಕಾರ್ ಎಂಬ ಲಿಂಗಪರಿವರ್ತನೆಗೊಂಡ ಮಹಿಳೆಯನ್ನು ಪೊಲೀಂಗ್ ಅಧಿಕಾರಿಯಾಗಿ ನೇಮಕ ಮಾಡಲಾಗಿತ್ತು.
ಮೋನಿಕಾ ದಾಸ್ ಅವರಿಗೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ತರಬೇತಿಗಳನ್ನು ನೀಡಲಾಗುವುದು ಎಂದು ಬಿಹಾರದ ಚುನಾವಣಾ ಆಯುಕ್ತ ಹೆಚ್ ಆರ್ ಶ್ರೀನಿವಾಸ ತಿಳಿಸಿದ್ದಾರೆ.
ಬಿಹಾರದಲ್ಲಿ ಲಿಂಗಪರಿವರ್ತನೆಗೊಂಡ 2,344 ಮಂದಿ ಮತದಾನಕ್ಕೆ ಅರ್ಹರಾಗಿದ್ದಾರೆ. ರಾಷ್ಟ್ರೀಯ ತೃತೀಯಲಿಂಗಿಗಳ ಪರಿಷತ್ ಮೋನಿಕಾ ದಾಸ್ ಅವರ ನೇಕಮದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ತಮ್ಮ ಸಮುದಾಯಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


