ದೇಶ

ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಜತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಚಿರಾಗ್ ಪಾಸ್ವಾನ್ ಘೋಷಣೆ

ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲೇ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಲ್ಲಿನ ಭಿನ್ನಮತ ಸ್ಪೋಟಗೊಂಡಿದೆ.

ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಜತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಚಿರಾಗ್ ಪಾಸ್ವಾನ್ ಘೋಷಣೆ
ಚಿರಾಗ್ ಪಾಸ್ವಾನ್
Published On :

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲೇ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಲ್ಲಿನ ಭಿನ್ನಮತ ಸ್ಪೋಟಗೊಂಡಿದೆ.

ಈ ಸಂಬಂದ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) ನಾಯಕ ಚಿರಾಗ್ ಪಾಸ್ವಾನ್ “ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಜೆಡಿ(ಯು) ನೊಂದಿಗೆ ಸೇರಿ ಪಕ್ಷ ಚುನಾವಣೆ ಎದುರಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಜೆಡಿಯು- ಬಿಜೆಪಿ ನಡುವೆ ಸೀಟುಗಳ ಹಂಚಿಕೆ ಸೂತ್ರ ಈಗಾಗಲೇ ಪೂರ್ಣಗೊಂಡಿವೆ.  ಇಂತಹ ಪರಿಸ್ಥಿತಿ ಸನ್ನಿವೇಶದಲ್ಲೂ ಚಿರಾಗ್ ಅವರ ಹೇಳಿಕೆ ಎನ್ ಡಿಎ ಮೈತ್ರಿಕೂಟ ಪಕ್ಷದೊಳಗಿನ ಬೇಗುದಿ ಹೊರಹೊಮ್ಮುವ ಸಾಧ್ಯತೆಗಳು ಕಂಡುಬರುತ್ತಿವೆ.

ಜೆಡಿ(ಯು) ಪಕ್ಷದೊಂದಿಗೆ ಎಲ್ ಜೆ ಪಿ ಮೊದಲಿನಿಂದಲೂ ಅಸಮಧಾನ ಹೊಂದಿದ್ದು, ನಮಗೆ ಜೆಡಿಯುನೊಂದಿಗೆ ಮಾತ್ರ ಸಮಸ್ಯೆಇದೆ, ಬಿಜೆಪಿಯೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಚಿರಾಗ್ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಜೊತೆ ಸ್ಪರ್ಧಿಸುವುದಿಲ್ಲ ಎಂದು ಚಿರಾಗ್  ಘೋಷಿಸಿದ್ದಾರೆ.

ಭಾನುವಾರ ಎಲ್ ಜೆ ಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯ ನಂತರ ಚಿರಾಗ್ ಮಾಧ್ಯಮಗಳೊಂದಿಗೆ ಮಾತನಾಡಿ.. ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಜೊತೆ ಕೂಡಿ ಜನ ಶಕ್ತಿ ಪಕ್ಷ ಸ್ಪರ್ಧಿಸುವುದಿಲ್ಲ. ಇಂದು ನಡೆದ ಸಮಾವೇಶದಲ್ಲಿ ಇದೇ ವಿಷಯದ ಬಗ್ಗೆ ಪ್ರಮುಖವಾಗಿ ಚರ್ಚಿಸಿದ್ದಾಗಿ, ಪಕ್ಷದ  ಸಂಸದೀಯ ಮಂಡಳಿ ಸಭೆ ಇದಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.