ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ: ನ್ಯಾಯಾಲಯ ತೀರ್ಪು
1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ರಾಂಚಿ: 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.
ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಈ ತೀರ್ಪಿತ್ತಿದ್ದಾರೆ. ರೇ ಅವರು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿದ್ದರು.
ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.
ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.
ಈ ಪ್ರಕರಣವು ಜಾರ್ಖಂಡ್‌ನ ಗಿರಿದಿಹ್ ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆ ಮಾಡಿದ್ದರ ಬಗೆಗೆ ಸಂಬಂಧ ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


