ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಹೊಸ ಯೋಜನೆ: ಜಾವಡೇಕರ್
ದೇಶದಲ್ಲಿ ಅಸ್ತಿತ್ವದಲ್ಲಿರುವ ಪ್ರಾಣಿ ಸಂಗ್ರಹಾಲಯಗಳ ಸುಧಾರಣೆ ಮತ್ತು ಹೊಸದನ್ನು ನಿರ್ಮಿಸಲು ಶೀಘ್ರದಲ್ಲೇ ಹೊಸ ಯೋಜನೆ ಜಾರಿಗೊಳಿಸುವುದಾಗಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ಪ್ರಾಣಿ ಸಂಗ್ರಹಾಲಯಗಳ ಸುಧಾರಣೆ ಮತ್ತು ಹೊಸದನ್ನು ನಿರ್ಮಿಸಲು ಶೀಘ್ರದಲ್ಲೇ ಹೊಸ ಯೋಜನೆ ಜಾರಿಗೊಳಿಸುವುದಾಗಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ಹೇಳಿದ್ದಾರೆ.
ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಣಿ ಮಿತ್ರ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪ್ರಾಣಿ ಸಂಗ್ರಹಾಲಯಗಳಿಗೆ ಭೇಟಿ ನೀಡುವ ಜನರ ಒಟ್ಟಾರೆ ಅನುಭವವನ್ನು ವೃದ್ಧಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಹಣ ಮೀಸಲಿರಿಸಲಾಗುವುದು ಎಂದರು.
ಒಂದು ತಿಂಗಳಲ್ಲಿ ಈ ಯೋಜನೆಯ ನೀಲಿನಕ್ಷೆ ಆರಂಭಿಸಲಾಗುವುದು ಮತ್ತು ಮುಂದಿನ ಬಜೆಟ್‌ನಲ್ಲಿ ಇದಕ್ಕೆ ಹಣ ಒದಗಿಸಲು ಸಚಿವಾಲಯ ಪ್ರಯತ್ನಿಸಲಿದೆ ಎಂದರು. ದೇಶದಲ್ಲಿ ಸದ್ಯ 160 ಪ್ರಾಣಿ ಸಂಗ್ರಹಾಲಯಗಳಿದ್ದು, ಸರ್ಕಾರಿ ಮತ್ತು ಖಾಸಗಿ ಝೂಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಪ್ರಾಣಿ ಸಂಗ್ರಹಾಲಯ ವಾಸ್ತವದಲ್ಲಿ ಪ್ರಾಣಿ ಸಂಗ್ರಹಾಲಯದಂತೆ ಅನುಭವ ನೀಡಬೇಕು. ಅಲ್ಲಿಗೆ ಭೇಟಿ ನೀಡುವ ಜನರಿಗೆ ಸಂತಸ ದೊರೆಯಬೇಕು. ಈ ನಿಟ್ಟಿನಲ್ಲಿ ಹೊಸ ಯೋಜನೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


