ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ: ನಿರ್ಮಲಾ ಸೀತಾರಾಮನ್
ಸಂಸತ್ತಿನಲ್ಲಿ ಜಾರಿಯಾದ ಮೂರು ಕೃಷಿ ಮಸೂದೆಗಳು ಕೃಷಿ ವಲಯದಲ್ಲಿ ಸುಧಾರಣೆ ತರಲಿದೆ ಎಂದಿರುವ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ.

ಚೆನ್ನೈ: ಸಂಸತ್ತಿನಲ್ಲಿ ಜಾರಿಯಾದ ಮೂರು ಕೃಷಿ ಮಸೂದೆಗಳು ಕೃಷಿ ವಲಯದಲ್ಲಿ ಸುಧಾರಣೆ ತರಲಿದೆ ಎಂದಿರುವ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಮಸೂದೆಗಳು ಬಹುಕಾಲದಿಂದ ಬಾಕಿ ಉಳಿದಿದ್ದವು ಮತ್ತು ಇವು ರೈತರಿಗೆ ಅವರ ಬೆಳೆಗಳನ್ನು ಯಾರಿಗೆ ಮತ್ತು ಯಾವ ಬೆಲೆಗೆ ಮಾರಾಟ ಮಾಡಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತವೆ ಎಂದರು.
ಈ ಹೊಸ ಸುಧಾರಣೆ ಬೆಳೆಗಳಮಾರಾಟ ಮತ್ತ ಹಣ ಪಾವತಿಗೆ ವೇಗ ನೀಡಲಿದೆ. ರಾಜ್ಯ ಕೃಷಿ ಮಾರುಕಟ್ಟೆಗಳು ಬದಲಾಗದಿದ್ದಲ್ಲಿ, ರೈತರು ಇತರ ರಾಜ್ಯಗಳಲ್ಲಿ ಕೂಡ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದು. ಇದರಿಂದ ಮಂಡಿಗಳು ಮತ್ತು ಮಧ್ಯವರ್ತಿಗಳಿಗೆ ಶೇ.8ರಿಂದ 8.5ರಷ್ಟು ಶುಲ್ಕ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ಎಂಎಸ್ ಪಿಯನ್ನು ರದ್ದುಗೊಳಿಸಲಾಗುವುದು ಎಂಬ ವದಂತಿಯನ್ನು ತಳ್ಳಿ ಹಾಕಿದ ಸಚಿವರು, ಮೊದಲು ಕೃಷಿ ಬೆಳೆಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುತ್ತಿದ್ದರು. ಆದರೂ, ರೈತರು ಈಗ ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಆದರೆ, ಭತ್ತ ಮತ್ತು ಗೋದಿಯ ಎಂಎಸ್ ಪಿ ಹೆಚ್ಚಳದಿಂದ ರೈತರು ಬೇರೆ ಬೆಳೆಗಳನ್ನು ತೊರೆದು ಭತ್ತ ಮತ್ತು ಗೋದಿ ಬೆಲೆಯ ಮೊರೆ ಹೋಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


