ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.
ಮುಂಬೈನ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ನ್ಯಾಯಾಲಯ (ಎನ್‌ಡಿಪಿಎಸ್) ರಿಯಾ ಚಕ್ರವರ್ತಿ ಹಾಗೂ ಅವರ ಸೋದರನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ.
ಈ ಪ್ರಕರಣದಲ್ಲಿ ರಿಯಾ, ಶೋಯಿಕ್ ಅವರಲ್ಲದೆ ಇತರ 18 ಮಂದಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿದೆ.
ವರದಿಗಳ ಪ್ರಕಾರ, ಎನ್‌ಸಿಬಿ ತನ್ನ ಸೂಚನೆಯಂತೆ ರಿಯಾ ಹಾಗೂ ಆಕೆಯ ಸೋದರ ಸುಶಾಂತ್ ಗೆ ಹಣಕಾಸು ಮತ್ತು ಡ್ರಗ್ಸ್ ವ್ಯವಸ್ಥೆ ಕಲ್ಪಿಸಿದ್ದರೆಂದು ಹೇಳಿದೆ. ಆದರೆ ರಿಯಾ ಮಾತ್ರ ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ವಾದಿಸಿದ್ದಾರೆ.
ಏತನ್ಮಧ್ಯೆ, ಡ್ರಗ್ಸ್ ಪ್ರಕರಣದಲ್ಲಿ ರಿಯಾ, ಶೋಯಿಕ್ ಮತ್ತಿತರರ ಜಾಮೀನು ಅರ್ಜಿಯ ಕುರಿತು ಬಾಂಬೆ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


